Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಶತ್ರುಗಳು ಅತ್ತ ಕಾಲಿಡದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಿರುವೆನು. ಯಾವ ಬಾಧಕನೂ ನನ್ನ ಜನರ ಮೇಲೆ ಧಾಳಿಮಾಡದಂತೆ ನಾನೇ ಕಣ್ಣಿಟ್ಟು ನೋಡಿಕೊಳ್ಳುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾರೂ ಹಾದುಹೋಗಿ ಬಾರದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ಬೀಳನು; ಏಕಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಶತ್ರುಸೈನ್ಯವು ಅದರೊಳಗಿಂದ ದಾಟಿಹೋಗಲು ನಾನು ಬಿಡೆನು. ಇನ್ನು ಮುಂದೆ ನನ್ನ ಜನರಿಗೆ ಅವರು ಹಾನಿಮಾಡದಂತೆ ಮಾಡುವೆನು. ಕಳೆದುಹೋದ ಸಮಯಗಳಲ್ಲಿ ಅವರೆಷ್ಟು ಸಂಕಟ ಅನುಭವಿಸಿದರೆಂದು ನನ್ನ ಸ್ವಂತ ಕಣ್ಣುಗಳಿಂದ ನೋಡಿರುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ, ಸೈನ್ಯದ ನಿಮಿತ್ತವೂ ನನ್ನ ಆಲಯದ ಹತ್ತಿರ ಪಾಳೆಯ ಮಾಡುತ್ತೇನೆ. ಇನ್ನು ಮೇಲೆ ಉಪದ್ರವ ಕೊಡುವವನು, ಅವರ ಮೇಲೆ ಹಾದು ಹೋಗುವುದಿಲ್ಲ. ಏಕೆಂದರೆ ಈಗ ನನ್ನ ಕಣ್ಣುಗಳಿಂದ ನೋಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:8
39 ತಿಳಿವುಗಳ ಹೋಲಿಕೆ  

ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.


ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.


ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು, ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ” ಇದು ನಿನ್ನ ದೇವರಾದ ಯೆಹೋವನ ನುಡಿ.


ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.


ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ. ಯೆಹೋವನು ನಿಮಗೆ ಮುಂಬಲವಾಗಿ ಮುಂದೆ ಹೋಗುವನು. ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಕಾಯುವನು.


ಹಾರುವ ಪಕ್ಷಿಯಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು. ಅದನ್ನು ರಕ್ಷಿಸಿ ಕಾಯುವನು ಮತ್ತು ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.


ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.


ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.


ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು.


ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.


ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು.


ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ’ ಎಂದು ಹೇಳಿದನು.


ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು.


ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತ ದೇಶವನ್ನು ಹೊಡೆಯುವನು” ಎಂಬುದಾಗಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ನುಡಿದನು.


ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ:


ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.


ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.


ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.


ಅವನ ಕಾಲದಲ್ಲಿ, ಐಗುಪ್ತದ ಅರಸನಾದ ಫರೋಹ ನೆಕೋ ಎಂಬುವವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ಎದ್ದು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಅಲ್ಲಿ ಅವನಿಂದ ಹತನಾದನು.


ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಮೀಸಲಾದ ಜನರಾಗಿ ಉಳಿಯುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.


ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ವಾಗ್ದಾನ ಮಾಡಿದ್ದಾನೆ.


ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.


ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳು ಭಯದಿಂದ ತಬ್ಬಿಬ್ಬಾಗುವಂತೆ ಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು