Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರು ನಿನಗೆ “ನಮ್ಮೊಡನೆ ಬಾ, ಹೊಂಚುಹಾಕಿ ಹತ್ಯೆಮಾಡೋಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು - ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವದಕ್ಕೆ ಕಾದಿರೋಣ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿನಗೆ, “ನಮ್ಮ ಜೊತೆ ಬಾ! ನಾವು ಅಲ್ಲಿ ಅವಿತುಕೊಂಡಿದ್ದು ಯಾರನ್ನಾದರೂ ಕೊಲೆಮಾಡೋಣ; ಕೆಲವು ನಿರಪರಾಧಿಗಳ ಮೇಲೆ ನಿಷ್ಕಾರಣವಾಗಿ ಆಕ್ರಮಣ ಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಒಂದು ವೇಳೆ ಅವರು ನಿನಗೆ, “ನಮ್ಮೊಂದಿಗೆ ಬಾ, ಜನರ ರಕ್ತಕ್ಕಾಗಿ ಒಳಸಂಚು ಮಾಡೋಣ, ನಿರಪರಾಧಿಯ ರಕ್ತಕ್ಕಾಗಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:11
19 ತಿಳಿವುಗಳ ಹೋಲಿಕೆ  

ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ; ಉರುಳುಗಳನ್ನು ಹಾಕಿ ಮನುಷ್ಯರನ್ನು ಹಿಡಿಯುತ್ತಾರೆ.


ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ.


ಕೆಟ್ಟವರ ಮಾತು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಪ್ರಾಣರಕ್ಷಣೆ.


ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.


ಆದುದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ, ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕೆಂದು ನೆವಹೇಳಿ ಅವನನ್ನು ಕೋಟೆಯೊಳಗೆ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ, ಅವನು ಹತ್ತಿರ ಬರುವುದಕ್ಕಿಂತ ಮೊದಲೇ ಅವನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದೇವೆ” ಅಂದರು.


ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.


ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು.


ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.


ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ.


ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.


ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ, ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ.


‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ, ಅವನ ನಿವಾಸವನ್ನು ಸೂರೆಮಾಡಬೇಡ.


ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು, ಆಣೆಯಿಡುವುದನ್ನು ಕೇಳಿದರೂ ಸುಮ್ಮನಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು