Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನನ್ನ ಬುದ್ಧಿವಾದವನ್ನು ಅಲಕ್ಷ್ಯಮಾಡಿದಿರಿ, ನನ್ನ ತಿದ್ದುಪಾಟನ್ನು ತಳ್ಳಿಬಿಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನೀವು ನನಗೆ ಮುಖ ತಿರುವಿಕೊಂಡಿರಿ; ನನ್ನ ಸಲಹೆಗಳನ್ನೆಲ್ಲ ಕಡೆಗಣಿಸಿದಿರಿ; ನನ್ನ ತಿದ್ದುಪಾಟನ್ನು ತಿರಸ್ಕರಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ; ನನ್ನ ಗದರಿಕೆಯನ್ನು ನೀವು ಬೇಡವೆಂದು ತಳ್ಳಿಬಿಟ್ಟಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:25
13 ತಿಳಿವುಗಳ ಹೋಲಿಕೆ  

ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.


ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.


ತಿಳಿವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ, ಮೂರ್ಖನು ಗದರಿಕೆಯನ್ನು ದ್ವೇಷಿಸುತ್ತಾನೆ.


ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು.


“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,


ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು, ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ,


ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.


ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ. ಆಗ ಆತನು ನಿಮ್ಮನ್ನು ಲಕ್ಷಿಸುವುದಿಲ್ಲ” ಅಂದನು.


ಸದ್ಯೋಚನೆಯೂ, ಸುಜ್ಞಾನವೂ, ಸಾಮರ್ಥ್ಯವೂ ನನ್ನಲ್ಲಿವೆ, ವಿವೇಕವೂ ನಾನೇ.


ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.


ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.


ನೀವು ಹಿಂದಿರುಗಿ ಬಂದು ಯೆಹೋವನ ಮುಂದೆ ಗೋಳಾಡಿದಾಗ ಆತನು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ ಮತ್ತು ರಕ್ಷಿಸಲೂ ಇಲ್ಲ.


ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು