Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ ತಿಳಿವಳಿಕೆಯನ್ನು ಹಗೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಏಕೆಂದರೆ ಸುಜ್ಞಾನವನ್ನೇ ಅವರು ದ್ವೇಷಿಸಿದರು, ಸರ್ವೇಶ್ವರನಲ್ಲಿ ಭಯಭಕ್ತಿಯಿರಿಸದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾಕಂದರೆ ಯೆಹೋವನ ಭಯಭಕ್ತಿಗೆ ಮನಸ್ಸಿಲ್ಲದೆ ತಿಳುವಳಿಕೆಯನ್ನು ಹಗೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಾನು ನಿಮಗೆ ಸಹಾಯ ಮಾಡುವುದಿಲ್ಲ; ಏಕೆಂದರೆ ನೀವೆಂದೂ ನನ್ನ ಜ್ಞಾನವನ್ನು ಬಯಸಲಿಲ್ಲ. ನೀವು ಯೆಹೋವನಲ್ಲಿ ಭಯಭಕ್ತಿಯಿಂದಿರಲು ನಿರ್ಧರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಏಕೆಂದರೆ ಅವರು ಅರಿವನ್ನು ಹಗೆಮಾಡಿ, ಯೆಹೋವ ದೇವರಿಗೆ ಭಯಪಡುವುದನ್ನು ಆರಿಸಿಕೊಳ್ಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:29
12 ತಿಳಿವುಗಳ ಹೋಲಿಕೆ  

“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.


ಸ್ವಲ್ಪ ಕಾಲದಲ್ಲಿ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು.


ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.


ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.


ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.


“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,


ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು