Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದ್ದರಿಂದ ನೀವು ನಿಮ್ಮ ದುರ್ನಡತೆಯ ಫಲಗಳನ್ನು ಅನುಭವಿಸುವಿರಿ. ನೀವು ಬೇರೆಯವರಿಗೆ ಮಾಡಿದ ಕುಯುಕ್ತಿಗಳನ್ನೇ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ, ತಮ್ಮ ಸ್ವಂತ ಕುಯುಕ್ತಿಗಳಿಂದಲೇ ಹೊಟ್ಟೆ ತುಂಬಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:31
17 ತಿಳಿವುಗಳ ಹೋಲಿಕೆ  

ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.


ನಾನು ನೋಡಿರುವ ಮಟ್ಟಿಗೆ ಅಧರ್ಮವನ್ನು ಉತ್ತು, ಕೇಡನ್ನು ಬಿತ್ತುವವರು ಕೇಡನ್ನೇ ಕೊಯ್ಯುವರು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಸದುಪದೇಶದ ಕೊರತೆಯಿಂದಲೇ ನಾಶವಾಗುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.


ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”


ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು.


ಬಾಯಿಯ ಫಲವಾಗಿ ಮನುಷ್ಯನು ಸುಖವನ್ನು ಅನುಭವಿಸುವನು, ಬಲಾತ್ಕಾರವೇ ದ್ರೋಹಿಗಳ ಕೋರಿಕೆ.


ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡರು.”


ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.


ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು!


ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.


ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.’ ಇದು ಕರ್ತನಾದ ಯೆಹೋವನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು