Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜ್ಞಾನಿಯಾದ ಮಗನಿಂದ ತಂದೆಗೆ ಆನಂದ, ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೊಲೊಮೋನನ ಜ್ಞಾನೋಕ್ತಿಗಳು. ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇವು ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದ ಮಗನಿಂದ ತಾಯಿಗೆ ದುಃಖ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನು ಉಂಟುಮಾಡುತ್ತಾನೆ. ಅಜ್ಞಾನಿಯಾದ ಮಗನಾದರೋ ತನ್ನ ತಾಯಿಗೆ ಶೋಕವನ್ನುಂಟು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:1
16 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು.


ಜ್ಞಾನವನ್ನು ಪ್ರೀತಿಸುವವನು ತಂದೆಯನ್ನು ಹರ್ಷಗೊಳಿಸುವನು, ವೇಶ್ಯೆಯ ಸಂಗಡಿಗನು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.


ಜ್ಞಾನಹೀನನಾದ ಮಗನು ತಂದೆಗೆ ಕಿರಿಕಿರಿ, ತಾಯಿಗೆ ಕರಕರೆ.


ಬೆತ್ತ ಮತ್ತು ಬೆದರಿಕೆಗಳಿಂದ ಜ್ಞಾನವುಂಟಾಗುವುದು, ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.


ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು, ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.


ಮೂರ್ಖನನ್ನು ಹೆತ್ತವರಿಗೆ ವ್ಯಥೆ, ಮೂರ್ಖನ ತಂದೆಗೆ ವ್ಯಸನ.


ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ.


ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.


ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ.


ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳು, ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಇವುಗಳನ್ನು ಸಂಗ್ರಹಿಸಿ ಬರೆದರು.


ಅವನ ಜ್ಞಾನೋಕ್ತಿಗಳು ಮೂರು ಸಾವಿರ ಮತ್ತು ಗೀತೆಗಳು ಸಾವಿರದ ಐದು.


ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು, ಧರ್ಮನಿಂದಕನೋ ಗದರಿಕೆಯನ್ನು ಕೇಳನು.


ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಹೃದಯವನ್ನು ಸಂತೋಷಪಡಿಸು, ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವುದು.


ಮಗನನ್ನು ಶಿಕ್ಷಿಸು, ಅವನು ನಿನ್ನನ್ನು ಸಂತೋಷಪಡಿಸುವನು, ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು