Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಶಿಷ್ಟನ ಬಾಯಿ ಜೀವದ ಬುಗ್ಗೆ, ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸಜ್ಜನನ ಬಾಯಿ ಜೀವದ ಬುಗ್ಗೆ; ದುರ್ಜನನ ಬಾಯಿತುಂಬ ಚಿತ್ರಹಿಂಸೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಶಿಷ್ಟನ ಬಾಯಿ ಜೀವದ ಬುಗ್ಗೆ; ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಒಳ್ಳೆಯವನ ಮಾತುಗಳು ನೀರಿನ ಬುಗ್ಗೆಯಂತೆ ಜೀವದಾಯಕ. ಕೆಡುಕನ ಮಾತುಗಳಲ್ಲಿ ಕೆಟ್ಟದ್ದೇ ಅಡಗಿಕೊಂಡಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀತಿವಂತನ ಬಾಯಿಯು ಜೀವದ ಬುಗ್ಗೆ; ಆದರೆ ದುಷ್ಟನ ಬಾಯಿ ಹಿಂಸೆಯನ್ನು ಮರೆಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:11
15 ತಿಳಿವುಗಳ ಹೋಲಿಕೆ  

ಜ್ಞಾನಿಯ ಬೋಧನೆ ಜೀವದ ಬುಗ್ಗೆ, ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು.


ಶಿಷ್ಟನ ತಲೆ ಆಶೀರ್ವಾದದ ನೆಲೆ, ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.


ಸತ್ಪುರುಷನ ನುಡಿಯು ಆಳವಾದ ನೀರು, ಜ್ಞಾನದ ಬುಗ್ಗೆ, ಹರಿಯುವ ತೊರೆ.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.


ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ.


ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ.


ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ.


ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವುದು.


ಸಂತೈಸುವ ನಾಲಿಗೆ ಜೀವವೃಕ್ಷವು, ಬಲತ್ಕರಿಸುವ ನಾಲಿಗೆ ಮನಮುರಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು