Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜಗಳವೆಬ್ಬಿಸುತ್ತದೆ ದ್ವೇಷ; ಪಾಪಗಳ ಮರೆಸುತ್ತದೆ ಪ್ರೇಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದ್ವೇಷವು ಜಗಳಗಳನ್ನೆಬ್ಬಿಸುತ್ತದೆ; ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದ್ವೇಷವು ವಾದವನ್ನು ಉಂಟುಮಾಡುತ್ತದೆ. ಆದರೆ ಪ್ರೀತಿಯು ಎಲ್ಲಾ ತಪ್ಪುಗಳನ್ನು ಕ್ಷಮಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಆದರೆ ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:12
10 ತಿಳಿವುಗಳ ಹೋಲಿಕೆ  

ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.


ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.


ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ?


ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು, ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.


ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ, ಅವನ ಮಾತುಗಳು ಬೆಂಕಿಯ ಉರಿಯಂತಿದೆ.


ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.


ಹಾಲು ಕಡೆಯುವುದರಿಂದ ಬೆಣ್ಣೆ, ಮೂಗು ಹಿಂಡುವುದರಿಂದ ರಕ್ತ, ಕೋಪಕಲಕುವುದರಿಂದ ಜಗಳ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು