Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ, ಮೂರ್ಖನ ಭಾಷಣ ನಾಶನಕ್ಕೆ ಸಮೀಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಬುದ್ಧಿವಂತರು ಜ್ಞಾನದ ಭಂಡಾರಿಗಳು; ಮೂರ್ಖನ ಮಾತುಗಳು ವಿನಾಶದ ಸೋಪಾನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವದಿಲ್ಲ, ಮೂರ್ಖನ ಭಾಷಣ ಸಮೀಪನಾಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಜ್ಞಾನಿಗಳು ಮೌನವಾಗಿದ್ದು ಹೊಸ ಸಂಗತಿಗಳನ್ನು ಕಲಿತುಕೊಳ್ಳುತ್ತಾರೆ. ಮೂಢರಾದರೋ ಮಾತಾಡಿ ತಮಗೇ ತೊಂದರೆಯನ್ನು ತಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಜ್ಞಾನಿಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ವಿನಾಶವನ್ನು ಆಹ್ವಾನಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:14
17 ತಿಳಿವುಗಳ ಹೋಲಿಕೆ  

ಜ್ಞಾನಹೀನನಿಗೆ ಬಾಯಿ ನಾಶ, ತುಟಿಗಳು ಪಾಶ.


ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.


ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ, ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.


ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು.


ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು.


ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.


“ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.


ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ.


ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.


ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.


ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.


ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.


ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.


ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.


ಜ್ಞಾನಿಯ ಮಾತು ಹಿತ. ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವುದು.


ವಕ್ರ ಹೃದಯನು ಶುಭವನ್ನು ಪಡೆಯನು, ಕೆಟ್ಟ ನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು