Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಶಿಷ್ಟನ ದುಡಿತ ಜೀವಾಸ್ಪದ, ದುಷ್ಟನ ಆದಾಯ ಪಾಪಾಸ್ಪದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸಜ್ಜನರ ದುಡಿತ ಜೀವಾಸ್ಪದ; ದುರ್ಜನರ ಆದಾಯ ಪಾಪಾಸ್ಪದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಶಿಷ್ಟನ ದುಡಿತ ಜೀವಾಸ್ಪದ; ದುಷ್ಟನ ಆದಾಯ ಪಾಪಾಸ್ಪದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಒಳ್ಳೆಯವರಿಗೆ ಪ್ರತಿಫಲವಾಗಿ ಜೀವ ದೊರೆಯುವುದು. ಕೆಡುಕರಿಗೆ ದಂಡನೆಯೇ ಸಂಬಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀತಿವಂತರ ದುಡಿತವು ಜೀವವಾಗುವುದು; ಆದರೆ, ದುಷ್ಟರ ಆದಾಯವು ಪಾಪ ಹಾಗು ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:16
14 ತಿಳಿವುಗಳ ಹೋಲಿಕೆ  

ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.


ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ಧರ್ಮಾತ್ಮನ ಫಲ ಜೀವವೃಕ್ಷ, ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.


ನೀತಿ ಮತ್ತು ಕೃಪೆಗಳನ್ನು ಹುಡುಕುವವನು ಜೀವ ಮತ್ತು ಕೀರ್ತಿಗಳನ್ನು ಪಡೆಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು