Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ವಾಚಾಳಿಗೆ ಪಾಪ ತಪ್ಪದು; ಮೌನಿಗೆ ಜ್ಞಾನ ಕೆಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮಾತಾಳಿಗೆ ಪಾಪ ತಪ್ಪದು; ಮೌನಿಯು ಮತಿವಂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅತಿಯಾಗಿ ಮಾತಾಡುವವನು ತನ್ನನ್ನೇ ತೊಂದರೆಗೆ ಸಿಕ್ಕಿಸಿಕೊಳ್ಳುತ್ತಾನೆ. ವಿವೇಕಿಯು ಮೌನವಾಗಿರಲು ಕಲಿತುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅತಿಯಾದ ಮಾತುಗಳಿಂದ ಪಾಪವು ಕೊನೆಗೊಳ್ಳುವುದಿಲ್ಲ. ಆದರೆ ಜ್ಞಾನವಂತನು ತನ್ನ ನಾಲಿಗೆಯನ್ನು ತಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:19
13 ತಿಳಿವುಗಳ ಹೋಲಿಕೆ  

ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ಬಹಳ ಚಿಂತೆಯ ಮೂಲಕ ಕನಸು ಉಂಟಾಗುತ್ತದೆ ಮತ್ತು ಮೂಢನ ಧ್ವನಿಯು ಬಹಳ ಮಾತುಗಳಿಂದ ಕೂಡಿದ್ದಾಗಿದೆ.


“ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು, ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು.


“ಬಹಳ ಮಾತುಗಳಿಗೆ ಉತ್ತರ ಕೊಡಬಾರದೋ? ವ್ಯರ್ಥವಾಗಿ ಮಾತನಾಡುವವ ನೀತಿವಂತನೆಂದು ಹೇಳಿಸಿಕೊಂಡಾನೇ?


ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,


ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.


ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು.


ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ನಂಬಿಗಸ್ತನು ಸಂಗತಿಗಳನ್ನು ಗುಪ್ತವಾಗಿಡುವನು.


ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.


ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವುದು ಲೇಸು. ತಾವು ತಪ್ಪು ಮಾಡುತ್ತಿದ್ದೇವೆಂಬುದು ಮೂಢರಿಗೆ ಗೊತ್ತೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು