Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅನ್ಯಾಯದ ಸಂಪತ್ತು ನಿಷ್ಪ್ರಯೋಜಕ; ಧರ್ಮವು ಮೃತ್ಯುವಿನಿಂದ ರಕ್ಷಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದುರ್ದ್ರವ್ಯವು ವ್ಯರ್ಥ; ಧರ್ಮವು ಮೃತ್ಯುವಿನಿಂದ ರಕ್ಷಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅನ್ಯಾಯದ ಹಣವು ನಿಷ್ಪ್ರಯೋಜಕವಾಗಿದೆ. ನೀತಿಯ ಜೀವಿತವು ಮರಣದಿಂದ ರಕ್ಷಿಸಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅನ್ಯಾಯದ ಸಂಪತ್ತುಗಳು ಶಾಶ್ವತವಲ್ಲ, ಆದರೆ ನೀತಿಯು ಮರಣದಿಂದ ಬಿಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:2
15 ತಿಳಿವುಗಳ ಹೋಲಿಕೆ  

ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.


ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.


ಧರ್ಮಮಾರ್ಗದಿಂದ ಜೀವಲಾಭವು, ಆ ಮಾರ್ಗದಲ್ಲಿ ಮರಣವಿಲ್ಲ.


ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!


ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.


ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.


ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.


ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.


ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು