Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಸನ್ಮಾರ್ಗಿಗೆ ಸರ್ವೇಶ್ವರನೆ ಆಶ್ರಯ; ಕೆಡುಕನಿಗೆ ಆತನೆ ಪ್ರಳಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಹೋವನು ಒಳ್ಳೆಯವರನ್ನು ಕೋಟೆಯಂತೆ ಕಾಪಾಡುತ್ತಾನೆ, ಕೆಡುಕರನ್ನಾದರೋ ನಾಶಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಹೋವ ದೇವರ ಮಾರ್ಗವು ನಿರ್ದೋಷಿಗಳಿಗೆ ಆಶ್ರಯವಾಗಿದೆ; ಆದರೆ ಕೇಡು ಮಾಡುವವರಿಗೆ ಅದು ವಿನಾಶಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:29
16 ತಿಳಿವುಗಳ ಹೋಲಿಕೆ  

ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ, ಕೆಡುಕರಿಗೆ ಕೇಡು.


ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.


ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.


ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.


ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,


ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು.


ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ.


ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.


ಆತನು ಅನ್ಯಾಯಗಾರರಿಗೆ ವಿಪತ್ತನ್ನೂ, ಕೆಡುಕರಿಗೆ ಉಪದ್ರವವನ್ನೂ ಕೊಡುತ್ತಾನಲ್ಲವೆ?


ಧರ್ಮವು ನಿರ್ದೋಷಿಯನ್ನು ಕಾಯುವುದು, ಅಧರ್ಮವು ದೋಷಿಯನ್ನು ಕೆಡವಿಬಿಡುವುದು.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.


ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು