Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಶಿಷ್ಟರು ಎಂದಿಗೂ ಕದಲರು, ದುಷ್ಟರು ದೇಶದಲ್ಲಿ ನಿಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸಜ್ಜನರು ಎಂದಿಗೂ ಕದಲರು; ದುರ್ಜನರು ನಾಡಿನಲ್ಲಿ ನಿಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಶಿಷ್ಟರು ಎಂದಿಗೂ ಕದಲರು; ದುಷ್ಟರು ದೇಶದಲ್ಲಿ ನಿಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಒಳ್ಳೆಯವರು ಯಾವಾಗಲೂ ಕ್ಷೇಮವಾಗಿರುವರು. ಆದರೆ ಕೆಡುಕರನ್ನು ದೇಶದಿಂದ ಬಲವಂತವಾಗಿ ಹೊರಗಟ್ಟಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೀತಿವಂತರು ಎಂದಿಗೂ ಕದಲುವುದೇ ಇಲ್ಲ; ಆದರೆ ದುಷ್ಟರು ಭೂಮಿಯಲ್ಲಿ ನಿಲ್ಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:30
16 ತಿಳಿವುಗಳ ಹೋಲಿಕೆ  

ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.


ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.


ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.


ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.


ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.


ಅವನು ಎಂದಿಗೂ ಕದಲುವುದಿಲ್ಲ; ನೀತಿವಂತನನ್ನು ಯಾವಾಗಲೂ ಸ್ಮರಿಸುವರು.


ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು