Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜೋಲುಗೈ ತರುತ್ತದೆ ದಾರಿದ್ರ್ಯ; ಚುರುಕು ಕೈ ತರುತ್ತದೆ ಐಶ್ವರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಜೋಲುಗೈ ದಾರಿದ್ರ್ಯ; ಚುರುಕುಗೈ ಐಶ್ವರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೋಮಾರಿಯು ಬಡವನಾಗಿರುತ್ತಾನೆ. ಕಷ್ಟಪಟ್ಟು ಕೆಲಸ ಮಾಡುವವನು ಐಶ್ವರ್ಯವಂತನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಲಸ್ಯದ ಕೈ ದರಿದ್ರನನ್ನಾಗಿ ಮಾಡುವದು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:4
19 ತಿಳಿವುಗಳ ಹೋಲಿಕೆ  

ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ.


ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?


ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.


ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ನಿದ್ರಾನಿರತನಾಗಿರಬೇಡ! ಬಡವನಾದೀಯೆ, ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.


ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರಕ್ಕೆ ತರಲಾರನು.


ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು.


ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು.


ಸೋಮಾರಿತನದಿಂದ ತೊಲೆಗಳು ಬೊಗ್ಗುವವು. ಜೋಲುಗೈಯಿಂದ ಮನೆ ಸೋರುವುದು.


ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು, ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.


ಮೈಗಳ್ಳನು ಹಿಡಿದ ಬೇಟೆಯನ್ನೂ ಅನುಭವಿಸಲಾರನು, ಸನ್ಮಾರ್ಗದಲ್ಲಿ ನಡೆಯುವವನಿಗೆ ಅಮೂಲ್ಯ ಸಂಪತ್ತು ದೊರಕುವುದು.


ಕೆಲಸಗಳ್ಳನು ಕೆಡುಕನಿಗೆ ತಮ್ಮ.


ಅದೇ ದಿನದಲ್ಲಿ ಇಸಾಕನ ಸೇವಕರು ಬಂದು, “ನಮಗೆ ನೀರು ಸಿಕ್ಕಿತು” ಎಂದು ಹೇಳಿ ತಾವು ತೋಡಿದ ಬಾವಿಯ ಸಂಗತಿಯನ್ನು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು