ಜ್ಞಾನೋಕ್ತಿಗಳು 11:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸಜ್ಜನರು ಸುಖಿಗಳಾದರೆ ಊರಿಗೆ ಉಲ್ಲಾಸ; ದುರ್ಜನರು ಹಾಳಾದರೆ ಮಾಡುವರು ಜಯಘೋಷ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ; ದುರ್ಜನರು ಹಾಳಾದರೆ ಜಯಘೋಷ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸಜ್ಜನರಿಗೆ ಜಯವಾದರೆ ನಗರಕ್ಕೆಲ್ಲ ಸಂತಸ. ಕೆಡುಕರು ನಾಶವಾದರೆ ಜನರು ಜಯಘೋಷ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀತಿವಂತರು ಅಭಿವೃದ್ಧಿಹೊಂದಿದರೆ, ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ, ಜಯೋತ್ಸವ ಉಂಟಾಗುತ್ತದೆ. ಅಧ್ಯಾಯವನ್ನು ನೋಡಿ |
ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.