Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವುದು, ಕೆಟ್ಟವರ ಬಾಯಿಂದ ಕೆಡವಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸತ್ಪುರುಷರ ಆಶೀರ್ವಾದದಿಂದ ಪುರೋದ್ಧಾರ; ದುಷ್ಟಜನರ ಕೆಟ್ಟ ಬಾಯಿಂದ ಅದರ ಸಂಹಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವದು, ಕೆಟ್ಟವರ ಬಾಯಿಂದ ಕೆಡವಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪಟ್ಟಣವು ತನ್ನಲ್ಲಿ ವಾಸವಾಗಿರುವ ಯಥಾರ್ಥವಂತರ ಆಶೀರ್ವಾದದಿಂದ ಏಳಿಗೆ ಹೊಂದುವುದು. ಕೆಡುಕರ ಮಾತುಗಳು ಪಟ್ಟಣವನ್ನು ನಾಶಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಪ್ರಗತಿಯಾಗುತ್ತದೆ, ಆದರೆ ದುಷ್ಟರ ಬಾಯಿಂದ ಅದು ನಾಶವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:11
14 ತಿಳಿವುಗಳ ಹೋಲಿಕೆ  

ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.


ಧರ್ಮನಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು, ಜ್ಞಾನಿಗಳೋ ರೋಷಾಗ್ನಿಯನ್ನು ಆರಿಸುವರು.


ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.


ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು. ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ.


ನಿರ್ದೋಷಿಯನ್ನು ಆತನು ತಪ್ಪಿಸುವನು, ಹೌದು, ಆತನು ಇಂಥವನನ್ನು ತಪ್ಪಿಸುವುದಕ್ಕೆ ನಿನ್ನ ಕೈಗಳ ಪರಿಶುದ್ಧತೆಯೇ ಕಾರಣವಾಗಿರುವುದು.”


ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.


“ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.


ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ.


ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು.


ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು