Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹಂದಿಯ ಮೂಗಿಗೆ ಚಿನ್ನದ ಮೂಗುತಿಯು ಹೇಗೋ, ಅವಿವೇಕಳಿಗೆ ಸೌಂದರ್ಯವು ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಲಜ್ಜೆಗೆಟ್ಟು ನಡೆಯುವ ಸೌಂದರ್ಯವತಿ; ಹಂದಿಯ ಮೂತಿಗೆ ಚಿನ್ನದ ಮೂಗುತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹಂದಿಯ ಮೂತಿಗೆ ಚಿನ್ನದ ಮೂಗುತಿಯು ಹೇಗೋ ಅವಿವೇಕಳಿಗೆ ಸೌಂದರ್ಯವು ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವಿವೇಕಳಿಗೆ ಸೌಂದರ್ಯವು ಹಂದಿಯ ಮೂಗಿನಲ್ಲಿರುವ ಸುಂದರವಾದ ಚಿನ್ನದ ಮೂಗುತಿಯಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹಂದಿಯ ಮೂಗಿಗೆ ಬಂಗಾರದ ಮೂಗುತಿಯು ಹೇಗೋ, ಹಾಗೆಯೇ ವಿವೇಕವಿಲ್ಲದ ಸ್ತ್ರೀಗೆ ಸೌಂದರ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:22
10 ತಿಳಿವುಗಳ ಹೋಲಿಕೆ  

ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.


ಅಜ್ಞಾನವೆಂಬವಳಾದರೋ ಕೂಗಾಟದವಳು, ಮೂಢಳು, ಏನೂ ತಿಳಿಯದವಳು.


ಇಗೋ ವೇಶ್ಯಾರೂಪವನ್ನು ಧರಿಸಿಕೊಂಡಿದ್ದ ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಂಡಳು.


“ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.


ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆಯು, ‘ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು.


ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.


ಗುಣವತಿಯಾದ ಸ್ತ್ರೀಯು ಪತಿಯ ತಲೆಗೆ ಕಿರೀಟ, ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು