Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮಾತಿನ ದೋಷದಿಂದ ಕೆಡುಕನು ಬೋನಿಗೆ ಬೀಳುವನು; ನೀತಿವಂತನು ಆಪತ್ತಿನಿಂದ ತಪ್ಪಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದುಷ್ಟನು ತುಟಿಗಳ ದೋಷದಿಂದ ಬೋನಿಗೆ ಬೀಳುವನು; ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕೆಡುಕನು ತನ್ನ ಕೆಟ್ಟಮಾತುಗಳಿಂದಲೇ ಸಿಕ್ಕಿಕೊಳ್ಳುವನು. ಆದರೆ ಒಳ್ಳೆಯವನು ಇಕ್ಕಟ್ಟುಗಳಿಂದ ಪಾರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದುಷ್ಟನು ತನ್ನ ತಪ್ಪು ಮಾತುಗಳಿಂದ ಬಲೆಗೆ ಬೀಳುವನು, ಆದರೆ ನೀತಿವಂತರು ಇಕ್ಕಟ್ಟಿನೊಳಗಿಂದ ತಪ್ಪಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:13
21 ತಿಳಿವುಗಳ ಹೋಲಿಕೆ  

ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.


ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.


ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.


ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿಕೊಂಡಿದ್ದೀ, ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ.


ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.


ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು.


ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.


ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.


ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.


ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.


ಇದಲ್ಲದೆ ಅರಸನಾದ ಸೊಲೊಮೋನನು, “ಯೆಹೋವನಾಣೆ, ಅದೋನೀಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ.


ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣರಿಗೆ,


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.


ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.


ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,


ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.


ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ


ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು