Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಜಾಣನು ತನ್ನ ಜ್ಞಾನವನ್ನು ಮುಚ್ಚಿಡುವನು; ಮೂಢನು ತನ್ನ ಮೂರ್ಖತನವನ್ನು ಪ್ರಕಟಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಜಾಣನು ತಿಳಿದದ್ದನ್ನು ಗುಪ್ತಪಡಿಸುವನು; ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಜಾಣನು ತನ್ನ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳುವುದಿಲ್ಲ. ಆದರೆ ಮೂಢನು ದುಡುಕಿ ಮಾತಾಡಿ ತಾನು ಮೂಢನೆಂದು ತೋರಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುತ್ತಾನೆ; ಆದರೆ ಮೂರ್ಖನ ಹೃದಯವು ಮೂರ್ಖತನವನ್ನು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:23
13 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು.


ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ನಂಬಿಗಸ್ತನು ಸಂಗತಿಗಳನ್ನು ಗುಪ್ತವಾಗಿಡುವನು.


ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ, ಮೂರ್ಖನ ಭಾಷಣ ನಾಶನಕ್ಕೆ ಸಮೀಪ.


ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.


ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.


ಇದಲ್ಲದೆ ಹುಚ್ಚನು ಬುದ್ಧಿತಪ್ಪಿ ತಿರುಗುವ ದಾರಿಯಲ್ಲಿ ತನ್ನ ಹುಚ್ಚುತನವನ್ನು ಎಲ್ಲರಿಗೆ ಪ್ರಕಟಮಾಡುವನು.


ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ.


ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು, ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.


ಸೌಲನು, “ಕತ್ತೆಗಳು ಸಿಕ್ಕಿವೇ ಎಂದು ತಿಳಿಸಿದನು” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ.


ಆಮೇಲೆ ಯೆರೂಸಲೇಮಿಗಾಗಿ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂಬುದನ್ನು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.


ನಾನು ಆ ವರೆಗೆ ಯೆಹೂದ್ಯರಿಗೂ, ಯಾಜಕರಿಗೂ, ಶ್ರೀಮಂತರಿಗೂ, ಅಧಿಕಾರಿಗಳಿಗೂ ಕೆಲಸ ಮಾಡುವ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬುದು ಯಾರಿಗೂ ಗೊತ್ತಾಗಲಿಲ್ಲ.


ವಿವೇಕಿಯ ಹೃದಯ ಜ್ಞಾನಾಶ್ರಯ, ಜ್ಞಾನಹೀನನ ಹೃದಯದಲ್ಲಿ ಅದು ಕಾಣದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು