Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಧರ್ಮಮಾರ್ಗದಿಂದ ಜೀವಲಾಭವು, ಆ ಮಾರ್ಗದಲ್ಲಿ ಮರಣವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸನ್ಮಾರ್ಗದಿಂದ ಜೀವಲಾಭ; ದುರ್ಮಾರ್ಗದಿಂದ ಮರಣ ಪ್ರಾಪ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಧರ್ಮಮಾರ್ಗದಿಂದ ಜೀವಲಾಭವು; ಆ ಸುಪಥಮಾರ್ಗವು ಅಮರಣವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೀತಿಯ ಮಾರ್ಗದಲ್ಲಿ ಜೀವವಿದೆ. ಆದರೆ ಮರಣಕ್ಕೆ ನಡೆಸುವ ಮತ್ತೊಂದು ಮಾರ್ಗವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀತಿಯ ಮಾರ್ಗದಲ್ಲಿ ಜೀವವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:28
17 ತಿಳಿವುಗಳ ಹೋಲಿಕೆ  

ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ, ಒಳ್ಳೆಯ ನಡತೆಯನ್ನು ಅನುಸರಿಸು; ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.


ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.


ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.


ಪ್ರಿಯರಾದ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.


ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ.


ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.


ಶಿಷ್ಟನ ದುಡಿತ ಜೀವಾಸ್ಪದ, ದುಷ್ಟನ ಆದಾಯ ಪಾಪಾಸ್ಪದ.


ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಅವನು ಯೆಹೋವನ ದಯೆಗೆ ಗುರಿಯಾಗುವನು.


“ನೋಡಿರಿ, ಈಗ ನಾನು ಜೀವ ಮತ್ತು ಶುಭಗಳನ್ನೂ ಹಾಗೂ ಮರಣ ಮತ್ತು ಅಶುಭಗಳನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.


ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಷ್ಯದ ವರ್ಷಗಳು ವೃದ್ಧಿಯಾಗುವವು.


ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.


“ನೀನು ಈ ಜನರಿಗೆ ಹೀಗೆ ಹೇಳು” ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಜೀವಿಸುವ ಮಾರ್ಗವನ್ನೂ ಮತ್ತು ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.


ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.


ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು