Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಗುಣವತಿಯಾದ ಸ್ತ್ರೀಯು ಪತಿಯ ತಲೆಗೆ ಕಿರೀಟ, ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಗುಣವಂತ ಸತಿ ಗಂಡನ ತಲೆಗೆ ಕಿರೀಟ; ಲಜ್ಜೆಗೆಟ್ಟ ಹೆಂಡತಿ ಆತನ ಎಲುಬಿಗೆ ಕ್ಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಗುಣವಂತೆಯು ಪತಿಯ ತಲೆಗೆ ಕಿರೀಟ; ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಗುಣವಂತಳಾದ ಹೆಂಡತಿಯು ಗಂಡನಿಗೆ ಕಿರೀಟದಂತಿರುವಳು; ಗಂಡನನ್ನು ನಾಚಿಕೆಗೆ ಗುರಿಮಾಡುವ ಹೆಂಡತಿಯು ಗಂಡನ ಎಲುಬಿಗೆ ಕ್ಷಯದಂತಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ಆದರೆ ನಾಚಿಕೆ ಪಡಿಸುವವಳು ಅವನ ಎಲುಬುಗಳಿಗೆ ಕ್ಷಯ ರೋಗದಂತೆ ಇರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:4
16 ತಿಳಿವುಗಳ ಹೋಲಿಕೆ  

ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು.


ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು.


ಆದರೂ ಕರ್ತನ ವಿಷಯದಲ್ಲಿ ಪುರುಷರಿಲ್ಲದೆ ಸ್ತ್ರೀಯರೂ, ಸ್ತ್ರೀಯರಿಲ್ಲದೆ ಪುರುಷರೂ ಇಲ್ಲ.


ಪುರುಷನು ದೇವರ ಪ್ರತಿರೂಪವೂ ಮತ್ತು ಪ್ರಭಾವವೂ ಆಗಿರುವುದರಿಂದ ತಲೆಯನ್ನು ಮುಚ್ಚಿಕೊಳ್ಳಬಾರದು. ಸ್ತ್ರೀಯಾದರೋ ಪುರುಷನ ಪ್ರಭಾವವಾಗಿದ್ದಾಳೆ.


ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ, ಕಾಡಿನ ವಾಸವೇ ಲೇಸು.


ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.


ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.


ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬುದು ಊರಿನವರಿಗೆಲ್ಲಾ ತಿಳಿದಿದೆ; ಆದ್ದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು.


ಶಿಷ್ಟರ ಉದ್ದೇಶ ನ್ಯಾಯ, ದುಷ್ಟರ ಆಲೋಚನೆ ಮೋಸ.


ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.


ಹಂದಿಯ ಮೂಗಿಗೆ ಚಿನ್ನದ ಮೂಗುತಿಯು ಹೇಗೋ, ಅವಿವೇಕಳಿಗೆ ಸೌಂದರ್ಯವು ಹಾಗೆ.


ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ.


ಪತಿಯು ಸಹ, “ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು” ಎಂದು ಆಕೆಯನ್ನು ಕೊಂಡಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು