Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೆಟ್ಟವರ ಮಾತು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಪ್ರಾಣರಕ್ಷಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದುರುಳರ ಮಾತು ಜೀವಕ್ಕೆ ಉರುಳು; ಸಜ್ಜನರ ಮಾತು ಪ್ರಾಣಕ್ಕೆ ನೆರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕೆಟ್ಟವರ ಮಾತು ರಕ್ತಕ್ಕೆ ಹೊಂಚು; ಯಥಾರ್ಥವಂತರ ನುಡಿ ರಕ್ಷಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕೆಡುಕರು ತಮ್ಮ ಮಾತುಗಳಿಂದ ಬೇರೆಯವರನ್ನು ನೋಯಿಸುತ್ತಾರೆ. ಒಳ್ಳೆಯವರ ಮಾತುಗಳಾದರೋ ಜನರನ್ನು ಅಪಾಯದಿಂದ ರಕ್ಷಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದುಷ್ಟರ ಮಾತುಗಳು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಅವರನ್ನು ಬಿಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:6
12 ತಿಳಿವುಗಳ ಹೋಲಿಕೆ  

ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ, ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.


ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ; ಉರುಳುಗಳನ್ನು ಹಾಕಿ ಮನುಷ್ಯರನ್ನು ಹಿಡಿಯುತ್ತಾರೆ.


ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;


ಆದುದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ, ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕೆಂದು ನೆವಹೇಳಿ ಅವನನ್ನು ಕೋಟೆಯೊಳಗೆ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ, ಅವನು ಹತ್ತಿರ ಬರುವುದಕ್ಕಿಂತ ಮೊದಲೇ ಅವನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದೇವೆ” ಅಂದರು.


ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.


ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.


ಶಿಷ್ಟರ ಉದ್ದೇಶ ನ್ಯಾಯ, ದುಷ್ಟರ ಆಲೋಚನೆ ಮೋಸ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು