Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸುಬುದ್ಧಿಯು ದಯಾಸ್ಪದವು, ದ್ರೋಹಿಯ ಮಾರ್ಗವು ನಾಶಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸುಬುದ್ಧಿ ದಯಾಸ್ಪದ; ದುರಾಚಾರ ವಿನಾಶಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸುಬುದ್ಧಿಯು ದಯಾಸ್ಪದವು; ದ್ರೋಹಿಯ ಮಾರ್ಗವು ನಾಶಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜನರು ಜಾಣನನ್ನು ಗೌರವಿಸುತ್ತಾರೆ. ಆದರೆ ನಂಬಿಕೆಗೆ ಯೋಗ್ಯನಲ್ಲದವನು ತೊಂದರೆಗೆ ಒಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ; ಆದರೆ ವಿಶ್ವಾಸದ್ರೋಹಿಯ ಮಾರ್ಗವು ನಾಶಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:15
11 ತಿಳಿವುಗಳ ಹೋಲಿಕೆ  

ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ.


ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?


ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.


ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.


ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆಯುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ಕೃಪೆಯು ಆತನ ಮೇಲೆ ಹೆಚ್ಚಾಗುತ್ತಾ ಬಂದಿತು.


ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು