Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:20
27 ತಿಳಿವುಗಳ ಹೋಲಿಕೆ  

ಜೀವಪ್ರದವಾದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ನೆಲೆಗೊಳ್ಳುವನು.


ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.


ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.


ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು.


ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.


ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.


ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.


ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿ,


ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದುಹೋಗುತ್ತದೆ.


ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ.


ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.


ಅವನು ಯೆಹೋಷಾಫಾಟನಿಗೆ, “ಯುದ್ಧಮಾಡುವುದಕ್ಕಾಗಿ ನೀನು ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಲು ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.


ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ತಿಳಿದು ಅವನ ವಿರುದ್ಧ ಯುದ್ಧಮಾಡಿದರು.


ಆದರೆ ಅವನು ಅ ಹಿರಿಯರ ಆಲೋಚನೆಯನ್ನು ನಿರಾಕರಿಸಿ, ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿದನು.


ಅವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ, ಅವನಿಗೆ ತಪ್ಪಾದ ಸಲಹೆ ಕೊಡುವವರಾದರು. ಆದುದರಿಂದ ಅವನು ಯೆಹೋವನಿಗೆ ವಿರುದ್ಧವಾಗಿ ದ್ರೋಹಿಯಾಗಿ ನಡೆದನು.


ಇಷ್ಟಸಿದ್ಧಿ ಮನಸ್ಸಿಗೆ ಸಿಹಿ, ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ.


ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳಿವಳಿಕೆಯನ್ನೂ ಕಾಣಲಾರೆ.


ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.


ಮಾಡಿದರೆ ಅವನ ದುರ್ನಡತೆಯನ್ನು ಅನುಸರಿಸಿ, ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು