Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯದ ಸೊತ್ತು; ಪಾಪಿಯ ಸೊತ್ತು ಸತ್ಪುರುಷರಿಗೆ ಸೇರುವ ಸಂಪತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ; ಪಾಪಿಯ ಸೊತ್ತು ಸಜ್ಜನರಿಗೆ ಗಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಒಳ್ಳೆಯವನಲ್ಲಿ ತನ್ನ ಮಕ್ಕಳಿಗೂ ಮೊಮ್ಮಕ್ಕಳಿಗೂ ಕೊಡಲು ಐಶ್ವರ್ಯವಿರುವುದು. ಕಟ್ಟಕಡೆಯಲ್ಲಿ, ಕೆಡುಕರು ಹೊಂದಿರುವದೆಲ್ಲಾ ಒಳ್ಳೆಯವರ ಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು; ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:22
11 ತಿಳಿವುಗಳ ಹೋಲಿಕೆ  

ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.


ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.


ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; ನೀತಿವಂತನ ವಂಶವು ಶುಭಹೊಂದುವುದು.


ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂ ಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂ ಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ಥ್ಯವನ್ನಾಗಿ ಬಿಡುವಿರಿ’ ಎಂದು ಹೇಳಿದಿಯಲ್ಲಾ.


ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ.


ನಿನ್ನ ಸೇವಕರ ಮಕ್ಕಳು ಬಾಳುವರು. ಅವರ ಸಂತತಿಯವರು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರುವರು” ಎಂದು ಮೊರೆಯಿಡುತ್ತೇನೆ.


ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ, ತಂದೆತಾಯಿಗಳು ಮಕ್ಕಳಿಗೆ ಭೂಷಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು