Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಶಿಷ್ಟನು ಹೊಟ್ಟೆತುಂಬಾ ಉಣ್ಣುವನು, ದುಷ್ಟನ ಹೊಟ್ಟೆ ಹಸಿದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನೀತಿವಂತನು ಹೊಟ್ಟೆತುಂಬ ಉಣ್ಣುವನು; ದುಷ್ಟನ ಹೊಟ್ಟೆ ಹಸಿವಿನಿಂದ ಬಳಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಶಿಷ್ಟನು ಹೊಟ್ಟೆತುಂಬಾ ಉಣ್ಣುವನು; ದುಷ್ಟನ ಹೊಟ್ಟೆ ಹಸಿದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಶಿಷ್ಟನು ತೃಪ್ತಿಯಾಗುವಷ್ಟು ತಿನ್ನುವನು. ಆದರೆ ದುಷ್ಟನು ಹಸಿವೆಯಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನೀತಿವಂತನು ತನ್ನ ಪ್ರಾಣವು ತೃಪ್ತಿಯಾಗುವವರೆಗೆ ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:25
17 ತಿಳಿವುಗಳ ಹೋಲಿಕೆ  

ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.


ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.


ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.


ಬಡತನವು ದಾರಿಗಳ್ಳನ ಹಾಗೂ ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.


ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟ ಮೃಗಗಳನ್ನೂ ಮತ್ತು ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.


ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ.


ಬಡತನವು ದಾರಿಗಳ್ಳನ ಹಾಗೂ, ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.


ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು.


ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ಣಗೊಳಿಸುತ್ತಾನೆ; ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ.


ಇದರ ಆದಾಯವನ್ನು ಆಶೀರ್ವದಿಸುವೆನು; ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು;


ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರಿಕೆಯನ್ನು ಗಮನಿಸುವವನಿಗೆ ಮಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು