ಜ್ಞಾನೋಕ್ತಿಗಳು 13:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಅದನ್ನು ಮಾಡಲಾರನು, ದುಷ್ಟನ ನಡತೆಯು ಹೇಸಿಕೆಗೂ, ನಾಚಿಕೆಗೂ ಆಸ್ಪದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸಜ್ಜನನಿಗೆ ಮೋಸಮಾತು ಅಸಹ್ಯ; ದುರ್ಜನನ ನಡತೆ ನಿಂದಾಸ್ಪದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಮಾಡಲೊಲ್ಲನು; ದುಷ್ಟನ ನಡತೆಯು ಹೇಸಿಕೆಗೂ ನಾಚಿಕೆಗೂ ಆಸ್ಪದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಶಿಷ್ಟರು ಸುಳ್ಳನ್ನು ದ್ವೇಷಿಸುತ್ತಾರೆ. ದುಷ್ಟರು ನಾಚಿಕೆಕರವಾದ ಕೆಲಸ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ, ಆದರೆ ದುಷ್ಟರು ತಮ್ಮನ್ನು ತಾವೇ ದುರ್ವಾಸನೆಗೊಳಪಡಿಸಿಕೊಳ್ಳುತ್ತಾರೆ ಮತ್ತು ತಮ್ಮ ಮೇಲೆ ಅವಮಾನವನ್ನು ತಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |
ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.