Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೊಯ್ಯುವ ಹಾದಿಯಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಒಳ್ಳೆಯದೆಂದು ಜನರು ಭಾವಿಸಿಕೊಂಡಿರುವ ಮಾರ್ಗವೊಂದುಂಟು. ಆದರೆ ಅದರ ಅಂತ್ಯ ಮರಣವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮನುಷ್ಯ ದೃಷ್ಟಿಗೆ ಸರಿ ತೋರುವ ಒಂದು ಮಾರ್ಗವಿದೆ, ಆದರೆ ಅದರ ಅಂತ್ಯವು ಮರಣದ ಮಾರ್ಗಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:12
11 ತಿಳಿವುಗಳ ಹೋಲಿಕೆ  

ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು, ಕಟ್ಟಕಡೆಗೆ ಅದು ಮರಣಮಾರ್ಗವೇ.


ಮೂರ್ಖನ ನಡತೆ ಅವನ ದೃಷ್ಟಿಗೆ ಸರಿ, ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು.


ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ.


ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?


ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.


ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.


ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.


ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ಅವನು ತನ್ನ ಮನಸ್ಸಿನಲ್ಲಿ, “ರಾಜ್ಯವು ಪುನಃ ದಾವೀದನ ಕುಟುಂಬದವರಿಗೆ ಆಗುವುದೋ ಏನೋ,


ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು