Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕೆಟ್ಟವರು ಒಳ್ಳೆಯವರಿಗೆ ಬಾಗುವರು, ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕೆಟ್ಟವರು ಒಳ್ಳೆಯವರಿಗೆ ಬಾಗಬೇಕಾಗುವುದು; ದುಷ್ಟರು ಸಜ್ಜನರ ಬಾಗಿಲಿಗೆ ಅಡ್ಡಬೀಳಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕೆಟ್ಟವರು ಒಳ್ಳೆಯವರಿಗೆ ಬಾಗುವರು; ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕೊನೆಯಲ್ಲಿ ಕೆಟ್ಟವರ ಮೇಲೆ ಒಳ್ಳೆಯವರು ಜಯಗಳಿಸುವರು. ಕೆಟ್ಟವರು ಬಲವಂತದಿಂದ ಒಳ್ಳೆಯವರ ಮುಂದೆ ತಲೆಬಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದುಷ್ಟರು ಒಳ್ಳೆಯವರಿಗೆ ಬಾಗುತ್ತಾರೆ, ದುಷ್ಟರು ನೀತಿವಂತರ ದ್ವಾರಗಳಲ್ಲಿ ಅಡ್ಡ ಬೀಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:19
17 ತಿಳಿವುಗಳ ಹೋಲಿಕೆ  

ನಾನು ಕಾರ್ಯಸಾಧಿಸುವ ದಿನದಲ್ಲಿ ಅಧರ್ಮಿಗಳು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.


ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ, ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು, ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು” ಎಂದನು.


ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು, ಮೂರ್ಖನು ಜ್ಞಾನವಂತನ ಅಧೀನದಲ್ಲಿ ಬಿದ್ದಿರುವನು;


ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು.


ಯೆಹೋಷಾಫಾಟನು, “ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು” ಅಂದನು. ಆಗ ಇಸ್ರಾಯೇಲ್, ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.


ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡ ಬಿದ್ದು, ನಮಗೆ ಒಂದು ಬೆಳ್ಳಿಕಾಸನ್ನು ರೊಟ್ಟಿಯ ಚೂರನ್ನು ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ಯಾಜಕನ ಸೇವೆಯಲ್ಲಿ ಯಾವುದಕ್ಕಾದರೂ ನಮ್ಮನ್ನು ಸೇರಿಸಿಕೋ” ಎಂದು ಅವನನ್ನು ಬೇಡಿಕೊಳ್ಳುವರು, ಎಂದು ಹೇಳಿದನು.


ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ಅವರು ಅದಕ್ಕೆ, “ನಿನ್ನ ಸೇವಕನಾದ ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಬದುಕಿದ್ದಾನೆ” ಎಂದು ಹೇಳಿ, ತಮ್ಮ ತಲೆಗಳನ್ನು ಬಾಗಿಸಿ ಅವನಿಗೆ ಅಡ್ಡಬಿದ್ದರು.


ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ಮೂರ್ಖರಿಗೆ ಮೂರ್ಖತನವೇ ಸ್ವತ್ತು, ಜಾಣರಿಗೆ ಜ್ಞಾನವೇ ಕಿರೀಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು