Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಇದೆ ದೃಢಭರವಸೆ; ಆತನ ಮಕ್ಕಳಿಗೆ ಆಶ್ರಯ ಇದ್ದೇ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೋವನಿಗೆ ಭಯಪಡುವದರಿಂದ ಕೇವಲ ನಿರ್ಭಯ; ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೋವನಲ್ಲಿ ಭಯಭಕ್ತಿಯುಳ್ಳವನು ಕ್ಷೇಮವಾಗಿರುವನು; ಅವನ ಮಕ್ಕಳು ಸಹ ಕ್ಷೇಮವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೆಹೋವ ದೇವರಿಗೆ ಭಯಪಡುವವನು ಭದ್ರಕೋಟೆಯನ್ನು ಹೊಂದಿದ್ದಾನೆ. ಆತನ ಮಕ್ಕಳಿಗೆ ಆಶ್ರಯವು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:26
19 ತಿಳಿವುಗಳ ಹೋಲಿಕೆ  

ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.


ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.


ಜ್ಞಾನವೂ, ತಿಳಿವಳಿಕೆಯೂ, ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವುದು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.


ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.


ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು.


ನನ್ನ ತಂದೆಯ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು.


ಇದಕ್ಕೆ ಯೆಹೋವನು, “ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು.


ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ.


ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು, ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು