Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕುಚೋದ್ಯನಿಗೆ ಜ್ಞಾನ ಹುಡುಕಿದರೂ ಸಿಕ್ಕದು; ವಿವೇಕಿಗೆ ತಿಳುವಳಿಕೆ ಸುಲಭವಾಗಿ ದಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಧರ್ಮನಿಂದಕನಿಗೆ ಹುಡುಕಿದರೂ ಜ್ಞಾನವು ಸಿಕ್ಕದು; ವಿವೇಕಿಗೆ ತಿಳುವಳಿಕೆಯು ಸುಲಭವಾಗಿ ದೊರೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜ್ಞಾನದೂಷಕನು ಜ್ಞಾನಕ್ಕಾಗಿ ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ. ಆದರೆ ವಿವೇಕಿಯು ತಿಳುವಳಿಕೆಯನ್ನು ಸರಾಗವಾಗಿ ಕಂಡುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಪಹಾಸ್ಯ ಮಾಡುವವನು ಜ್ಞಾನವನ್ನು ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ, ಆದರೆ ವಿವೇಚಿಸುವವನಿಗೆ ಜ್ಞಾನವು ಸುಲಭವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:6
24 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.


ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.


ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ, ತಿಳಿವಳಿಕೆಯನ್ನು ಪಡೆದವರಿಗೆ ಯಥಾರ್ಥವಾಗಿಯೂ ತೋರುವವು.


ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.


ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.


ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ.


ವಿವೇಕಿಗೆ ಜ್ಞಾನವೇ ಗುರಿಯಾಗಿರುವುದು, ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವುದು.


ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.


ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.


ಸತ್ಯಸಾಕ್ಷಿಯು ಸುಳ್ಳಾಡನು, ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.


ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳಿವಳಿಕೆಯನ್ನೂ ಕಾಣಲಾರೆ.


ಜ್ಞಾನವು ಮೂರ್ಖನಿಗೆ ನಿಲುಕದು, ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.


ನನ್ನ ಮಾತುಗಳೆಲ್ಲಾ ನೀತಿಭರಿತವಾಗಿವೆ, ಅವುಗಳಲ್ಲಿ ಕಪಟವೂ, ವಕ್ರತೆಯೂ ಇಲ್ಲ.


ಧರ್ಮನಿಂದಕನು ಗದರಿಕೆಯನ್ನು ಕೇಳನು, ಜ್ಞಾನಿಗಳ ಸಂಗಡ ಸೇರನು.


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು