Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳಿವಳಿಕೆಯನ್ನೂ ಕಾಣಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮೂರ್ಖನಿಂದ ದೂರವಿರು; ಜ್ಞಾನವಚನ ಅವನಲ್ಲಿ ಕಾಣಸಿಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳುವಳಿಕೆಯನ್ನೂ ಕಾಣಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಜ್ಞಾನಿಯೊಡನೆ ಸ್ನೇಹ ಬೆಳಸಬೇಡಿ; ನಿಮಗೆ ಉಪದೇಶಿಸಲು ಅವನಲ್ಲೇನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀನು ಬುದ್ಧಿಹೀನನ ತುಟಿಗಳಲ್ಲಿ ಪರಿಜ್ಞಾನವನ್ನು ಕಾಣದೆ ಹೋದರೆ, ಅವನ ಬಳಿಯಿಂದ ಹೊರಟು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:7
8 ತಿಳಿವುಗಳ ಹೋಲಿಕೆ  

ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.


ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.


ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.


ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.


ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು.


ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು.


ಮೂಢನ ಸಂಗಡ ಮಾತನಾಡಬೇಡ, ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.


“ಯೆಹೋವನು ಹೇಳಿರುವುದೇನೆಂದರೆ, ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದು ಹಾಕುವೆನು” ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು