Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೆಮ್ಮದಿಯಿಲ್ಲದ ಸಿರಿಸಂಪತ್ತಿಗಿಂತಲು, ಸರ್ವೇಶ್ವರನ ಭಯಭಕ್ತಿಯಿಂದ ಕೂಡಿದ ಕಿಂಚಿತ್ತೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪಧನವೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಹಳ ಐಶ್ವರ್ಯವನ್ನು ಹೊಂದಿದ್ದು ಸಮಾಧಾನವಿಲ್ಲದೆ ಇರುವುದಕ್ಕಿಂತ ಸ್ವಲ್ಪ ಐಶ್ವರ್ಯವನ್ನು ಹೊಂದಿದ್ದು ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ತೊಂದರೆಯಿಂದ ಕೂಡಿದ ದೊಡ್ಡ ಸಂಪತ್ತಿಗಿಂತ ಯೆಹೋವ ದೇವರ ಭಯದಿಂದ ಕೂಡಿದ ಅಲ್ಪವೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:16
11 ತಿಳಿವುಗಳ ಹೋಲಿಕೆ  

ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ, ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು.


ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.


ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.


ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.


ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.


ದೀನನ ದಿನಗಳೆಲ್ಲಾ ದುಃಖಭರಿತ, ಹರ್ಷಹೃದಯನಿಗೆ ನಿತ್ಯವೂ ಔತಣ.


ಗಾಳಿಯನ್ನು ಹಿಂದಟ್ಟುವ ಹಾಗೆಯೇ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಾಗಿ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.


ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ, ಸಮಾಧಾನದ ಒಣತುತ್ತೇ ಮೇಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು