Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು, ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುತ್ತಾನೆ; ಬುದ್ಧಿವಂತನು ಸನ್ಮಾರ್ಗದಲ್ಲಿ ಮುಂದುವರಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು; ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮೂಢನಿಗೆ ಮೂಢತನದಲ್ಲಿ ಸಂತೋಷ. ಜ್ಞಾನಿಯು ಎಚ್ಚರಿಕೆಯಿಂದಿದ್ದು ಒಳ್ಳೆಯದನ್ನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಬುದ್ಧಿಹೀನನು ಮೂರ್ಖತನದಲ್ಲಿ ಉಲ್ಲಾಸಿಸುವನು. ತಿಳುವಳಿಕೆಯನ್ನು ಹೊಂದಿರುವವನು ನೇರ ಮಾರ್ಗದಲ್ಲಿ ನಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:21
13 ತಿಳಿವುಗಳ ಹೋಲಿಕೆ  

ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.


ಅವಿವೇಕಿಗೆ ಕುಯುಕ್ತಿ ವಿನೋದ ವಿವೇಕಿಗೆ ಜ್ಞಾನ ವಿನೋದ.


ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.


ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವುದು, ಯಥಾರ್ಥವಂತರಲ್ಲಿ (ದೇವರ) ದಯೆಯಿರುವುದು.


ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು.


ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.


ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.


ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.


ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು.


ನೆಟ್ಟಗೆ ದೃಷ್ಟಿಸು, ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ.


ನೀನು ನಡೆಯುವ ದಾರಿಯನ್ನು ಸಮಮಾಡು, ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು