Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸವಿನುಡಿಯು ಜೇನುಕೊಡ, ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸವಿನುಡಿಯು ಜೇನಿನ ಕೊಡವು; ಅದು ಆತ್ಮಕ್ಕೆ ಇಂಪು, ದೇಹಕ್ಕೆ ತಂಪು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸವಿನುಡಿಯು ಜೇನುಕೊಡ; ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸವಿನುಡಿಗಳು ಜೇನಿನಂತಿವೆ. ಅವು ಸ್ವೀಕಾರಕ್ಕೆ ಸುಲಭ; ಆರೋಗ್ಯಕ್ಕೆ ಉಪಯುಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ವಿನಯದ ಮಾತುಗಳು ಜೇನುಗೂಡು ಪ್ರಾಣಕ್ಕೆ ಮಧುರವೂ, ಎಲುಬುಗಳಿಗೆ ಕ್ಷೇಮವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:24
18 ತಿಳಿವುಗಳ ಹೋಲಿಕೆ  

ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು, ಜ್ಞಾನವಂತರ ಮಾತು ಸ್ವಸ್ಥತೆಯನ್ನು ತರುವುದು.


ಅವುಗಳನ್ನು ಹೊಂದುವವರಿಗೆ ಅವು ಜೀವವು, ದೇಹಕ್ಕೆಲ್ಲಾ ಅವೇ ಆರೋಗ್ಯವು.


ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, ಎಲುಬುಗಳಿಗೆ ಸಾರವೂ ಉಂಟಾಗುವವು.


ಹೌದು, ನಿನ್ನ ತುಟಿಗಳು ನೀತಿಯ ನುಡಿಗಳನ್ನಾಡಿದರೆ ನನ್ನ ಅಂತರಾತ್ಮವು ಹಿಗ್ಗುವುದು.


ತೈಲವೂ, ಸುಗಂಧದ್ರವ್ಯಗಳೂ ಹೇಗೋ, ಮಿತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.


ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ, ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.


ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.


ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!


ಕುಯುಕ್ತಿಯು ಯೆಹೋವನಿಗೆ ಅಸಹ್ಯ, ನಯನುಡಿಯು ಆತನಿಗೆ ಪ್ರಿಯ.


ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.


ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ! ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ!


ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಮತ್ತು ಹಾಲೂ ನಿನ್ನ ನಾಲಿಗೆಯ ಅಡಿಯಲ್ಲಿವೆ, ನಿನ್ನ ಉಡುಪುಗಳು ಲೆಬನೋನಿನ ಸುಗಂಧ ಸೂಸುತ್ತಿದೆ.


ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ.


ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.


ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು