Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಕಣ್ಣನ್ನು ಮುಚ್ಚಿಕೊಳ್ಳುವವನು ಕುಯುಕ್ತಿಯನ್ನು ಕಲ್ಪಿಸುವನು, ತುಟಿಯನ್ನು ಕಚ್ಚುವವನು ಕೇಡನ್ನು ಸಾಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಕಣ್ಣುಮಿಟುಕಿಸುವವನು ಕುಯುಕ್ತಿಯನ್ನು ಕಲ್ಪಿಸುತ್ತಾನೆ; ತುಟಿಕಚ್ಚುವವನು ಕೇಡನ್ನು ಸಾಧಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಕಣ್ಣನ್ನು ಮುಚ್ಚಿಕೊಳ್ಳುವವನು ಕುಯುಕ್ತಿಗಳನ್ನು ಕಲ್ಪಿಸುವನು; ತುಟಿಯನ್ನು ಮಡಸಿಕೊಳ್ಳುವವನು ಕೇಡನ್ನು ಸಾಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಕಣ್ಣುಮಿಟುಕಿಸಿ ನಗುವವನು ತಪ್ಪಾದ ಹಾಗೂ ಕೆಟ್ಟಕಾರ್ಯವೆಸಗಲು ಯೋಜಿಸುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ವಕ್ರಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ. ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:30
11 ತಿಳಿವುಗಳ ಹೋಲಿಕೆ  

ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.


ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’” ಎಂಬುದೇ.


ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.


ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ, ಅವನ ಮಾತುಗಳು ಬೆಂಕಿಯ ಉರಿಯಂತಿದೆ.


ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು.


ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುವನು.


ನರೆಗೂದಲೇ ಸುಂದರ ಕಿರೀಟವು, ಅದು ಧರ್ಮಮಾರ್ಗದಲ್ಲಿ ದೊರಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು