Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ದೀರ್ಘಶಾಂತನು ಪರಾಕ್ರಮಶಾಲಿಗಿಂತ ಶ್ರೇಷ್ಠ; ತನ್ನನ್ನು ತಾನೆ ಗೆದ್ದವನು ಪಟ್ಟಣ ಗೆದ್ದವನಿಗಿಂತ ಬಲಿಷ್ಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ; ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಶೂರನಾಗಿರುವುದಕ್ಕಿಂತ ತಾಳ್ಮೆಯಿಂದಿರುವುದೇ ಶ್ರೇಷ್ಠ; ಪಟ್ಟಣವನ್ನು ವಶಪಡಿಸಿಕೊಳ್ಳುವುದಕ್ಕಿಂತ ನಿಮ್ಮ ಕೋಪವನ್ನು ಸ್ವಾಧೀನದಲ್ಲಿಟ್ಟುಕೊಳ್ಳವುದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ, ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:32
16 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು ಗೋಡೆ ಬಿದ್ದ ಹಾಳೂರಿಗೆ ಸಮಾನ.


ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.


ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.


ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.


ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು.


ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಸೊಕ್ಕಿನವರ ಸಂಗಡ ಸೂರೆಯನ್ನು ಹಂಚಿಕೊಳ್ಳುವುದಕ್ಕಿಂತಲೂ, ದೀನರ ಸಂಗಡ ದೈನ್ಯದಿಂದಿರುವುದು ವಾಸಿ.


ದಮಸ್ಕದ ಅಬಾನಾ ಮತ್ತು ಪರ್ಪರ್ ಎಂಬ ನದಿಗಳು ಇಸ್ರಾಯೇಲರ ಎಲ್ಲಾ ನದಿ ಹೊಳೆಹಳ್ಳಗಳಿಗಿಂತ ಉತ್ತಮವಾಗಿವೆಯಲ್ಲವೋ? ಸ್ನಾನದಿಂದ ಶುದ್ಧನಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಲ್ಲವೇ?” ಎಂದು ಹೇಳಿ, ಬಲು ಸಿಟ್ಟಿನಿಂದ ಹೊರಟುಹೋದನು.


ನರೆಗೂದಲೇ ಸುಂದರ ಕಿರೀಟವು, ಅದು ಧರ್ಮಮಾರ್ಗದಲ್ಲಿ ದೊರಕುವುದು.


ಮಡಲಿನಲ್ಲಿ ಚೀಟು ಹಾಕಬಹುದು, ಅದರ ತೀರ್ಪು ಯೆಹೋವನದೇ.


ಆದಿಗಿಂತ ಅಂತ್ಯವು ಲೇಸು; ಅಹಂಕಾರಿಗಿಂತ ತಾಳ್ಮೆಯುಳ್ಳವನು ಉತ್ತಮ.


ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು, ಮೃದುವಚನವು ಎಲುಬನ್ನು ಮುರಿಯುವುದು.


ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು