Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ, ಅವರಿಗೆ ದಂಡನೆ ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಗರ್ವಿಷ್ಠನು ಯಾರೇ ಆಗಿರಲಿ, ಅವನು ಸರ್ವೇಶ್ವರನಿಗೆ ಅಸಹ್ಯ; ಅವನಿಗೆ ದಂಡನೆ ತಪ್ಪದು, ಇದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ; ಅವರಿಗೆ ದಂಡನೆ ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಗರ್ವಿಷ್ಠರು ಯೆಹೋವನಿಗೆ ಅಸಹ್ಯ. ಆ ಗರ್ವಿಷ್ಠರಿಗೆ ಯೆಹೋವನ ದಂಡನೆ ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಯೆಹೋವ ದೇವರಿಗೆ ಅಸಹ್ಯ. ದುಷ್ಟನಿಗೆ ಶಿಕ್ಷೆಯು ತಪ್ಪುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:5
14 ತಿಳಿವುಗಳ ಹೋಲಿಕೆ  

ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.


ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.


ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ, ದುಷ್ಟರನ್ನು ತಟ್ಟನೆ ಕೆಡವಿಬಿಡು.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು, ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು.


ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ.


ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.


ಕಿವಿಗೊಟ್ಟು ಕೇಳಿರಿ, ಹೆಮ್ಮೆಪಡಬೇಡಿರಿ; ಯೆಹೋವನೇ ಮಾತನಾಡಿದ್ದಾನೆ.


ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು