Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ ಅವನ ಶತ್ರುಗಳನ್ನೂ ವಿುತ್ರರನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:7
24 ತಿಳಿವುಗಳ ಹೋಲಿಕೆ  

ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.


ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,


ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರೆಗೆ ಯೆಹೋವನ ಭಯವಿದ್ದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.


ಇದಕ್ಕೆ ಯೆಹೋವನು, “ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು.


ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಅತ್ತರು.


ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.


ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.


ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ, ಎಳೇ ಹೋರಿಗಳ ಯಜ್ಞಕ್ಕಿಂತ ಬಹು ಪ್ರಿಯವಾದದ್ದು.


ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.


ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?


“ಇದಲ್ಲದೆ ಈ ನನ್ನ ಜನರ ಮೇಲೆ ಐಗುಪ್ತ್ಯರಿಗೆ ದಯೆಯುಂಟಾಗುವಂತೆ ಮಾಡುವೆನು. ಆದ್ದರಿಂದ ನೀವು ಹೊರಡುವಾಗ ಬರಿಗೈಯಲ್ಲಿ ಬರಬೇಕಾಗುವುದಿಲ್ಲ.


ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ.


ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ, ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು.


“ಅವನನ್ನು ಕರೆಯಿಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವುದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು” ಎಂದು ಅಪ್ಪಣೆಕೊಟ್ಟನು.


ಅವನು ನಿಮ್ಮನ್ನು ಕರುಣಿಸಿ ಸ್ವದೇಶಕ್ಕೆ ಹೋಗುವಂತೆ ನಾನು ನಿಮಗೆ ಕರುಣೆಯನ್ನು ಅನುಗ್ರಹಿಸುವೆನು’ ಎಂದೆನು.


ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು.


ಹೀಗೆ ದೇವರ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳು ಭಯಭೀತರಾದರು. ಯೆಹೋಷಾಫಾಟನ ರಾಜ್ಯಕ್ಕೆ ಶತ್ರುಗಳ ಭಯತಪ್ಪಿ ಸಮಾಧಾನ ಉಂಟಾಯಿತು.


ಆ ಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ, ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ಮತ್ತು ದೇವಾಲಯಕ್ಕೂ ಸಹಾಯಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು