Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ, ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನ್ಯಾಯದಿಂದ ಗಳಿಸಿದ ಅಪಾರ ನಿಧಿಗಿಂತಲು ನ್ಯಾಯದಿಂದ ಕೂಡಿಸಿದ ಅಲ್ಪ ಧನ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅನ್ಯಾಯದಿಂದ ಹೆಚ್ಚು ಸಂಪಾದಿಸುವುದಕ್ಕಿಂತ ನ್ಯಾಯವಾಗಿ ಸ್ವಲ್ಪ ಸಂಪಾದಿಸುವುದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅನ್ಯಾಯದ ದೊಡ್ಡ ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:8
12 ತಿಳಿವುಗಳ ಹೋಲಿಕೆ  

ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.


ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.


ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.


ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ ಮತ್ತು ಅಸಹ್ಯಕರವಾದ ಕಿರಿಯಳತೆ ಇವು ಇನ್ನೂ ಸಿಕ್ಕುತ್ತವೆಯೋ?


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.


ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.


ಗಾಳಿಯನ್ನು ಹಿಂದಟ್ಟುವ ಹಾಗೆಯೇ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಾಗಿ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.


ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ, ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ.


ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ, ಸಮಾಧಾನದ ಒಣತುತ್ತೇ ಮೇಲು.


ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು