Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮೂರ್ಖತನದಲ್ಲಿ ಮುಳುಗಿರುವ ಮೂಢನಿಗೆ ಎದುರಾಗುವುದಕ್ಕಿಂತಲು ಮರಿಗಳನ್ನು ಕಳೆದುಕೊಂಡ ಕರಡಿಗೆ ಎದುರಾಗುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೂರ್ಖತನದಲ್ಲಿ ಮುಣುಗಿರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮೂಢಕಾರ್ಯಗಳಲ್ಲಿ ನಿರತನಾಗಿರುವ ಮೂಢನನ್ನು ಭೇಟಿಯಾಗುವುದಕ್ಕಿಂತ ತನ್ನ ಮರಿಗಳನ್ನು ಕಳೆದುಕೊಂಡು ಕೋಪದಿಂದಿರುವ ತಾಯಿಕರಡಿಗೆ ಎದುರಾಗುವುದೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತನ್ನ ಮೂಢತೆಯಲ್ಲಿರುವ ಬುದ್ಧಿಹೀನನನ್ನು ಸಂಧಿಸುವುದಕ್ಕಿಂತ ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಸಂಧಿಸುವುದು ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:12
8 ತಿಳಿವುಗಳ ಹೋಲಿಕೆ  

ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಸೀಳಿಬಿಡುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಹರಿದುಬಿಡುವವು.


ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.


ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.


ಕಲ್ಲು ಭಾರ, ಮರಳು ಭಾರ, ಎರಡಕ್ಕಿಂತಲೂ ಮೂಢನ ಕೋಪವು ಬಲು ಭಾರ.


ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.


ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು, ಕ್ರೂರದೂತನು ಅವನನ್ನು ಆಕ್ರಮಿಸುವನು.


ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ, ರೇಗಿದರೂ, ನಕ್ಕರೂ ಜಗಳವು ತೀರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು