Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಪಾಪಪ್ರಿಯನು ಕಲಹಪ್ರಿಯ, ಸೊಕ್ಕಿನಿಂದ ಮಾತನಾಡುವವನು ಕೇಡು ಬರಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕಲಹಪ್ರಿಯನು ಪಾಪಪ್ರಿಯನು; ಕದವನ್ನು ಎತ್ತರಿಸಿದವನು ಕೇಡನ್ನು ಬರಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಪಾಪಪ್ರಿಯನು ಕಲಹಪ್ರಿಯ; ತನ್ನ ಬಾಗಿಲನ್ನು ಎತ್ತರಿಸುವವನು ಹಾಳಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಜಗಳದಲ್ಲಿ ಸಂತೋಷಿಸುವವನು ಪಾಪದಲ್ಲಿಯೂ ಸಂತೋಷಿಸುವನು. ಜಂಬಕೊಚ್ಚಿಕೊಳ್ಳುವುದು ಕೇಡನ್ನು ಕರೆಯುವುದಕ್ಕೆ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕಲಹವನ್ನು ಪ್ರೀತಿಮಾಡುವವನು ಪಾಪವನ್ನು ಪ್ರೀತಿಮಾಡುತ್ತಾನೆ; ತನ್ನ ಗೋಡೆಯನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಆಮಂತ್ರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:19
14 ತಿಳಿವುಗಳ ಹೋಲಿಕೆ  

ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.


ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.


ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.


ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ, ರೇಗಿದರೂ, ನಕ್ಕರೂ ಜಗಳವು ತೀರುವುದಿಲ್ಲ.


ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ಆನಂತರ ಹಗ್ಗೀತಳ ಮಗನಾದ ಅದೋನೀಯನು, “ನಾನೇ ಅರಸನಾಗತಕ್ಕವನು” ಎಂಬುದಾಗಿ ಹೇಳಿ ಉಬ್ಬಿಕೊಂಡು, ತನಗೋಸ್ಕರ ರಥರಥಾಶ್ವಗಳನ್ನೂ, ಮುಂದೆ ಓಡುವುದಕ್ಕಾಗಿ ಐವತ್ತು ಸಿಪಾಯಿಗಳನ್ನೂ ನೇಮಿಸಿಕೊಂಡನು.


ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು.


ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು