Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ವಕ್ರ ಹೃದಯನು ಶುಭವನ್ನು ಪಡೆಯನು, ಕೆಟ್ಟ ನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ವಕ್ರಮನಸ್ಸುಳ್ಳವನು ಒಳಿತನ್ನು ಕಾಣನು; ಕೆಟ್ಟ ನಾಲಿಗೆಯವನು ಸಂಕಟಕ್ಕೆ ಸಿಕ್ಕಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ವಕ್ರಹೃದಯನು ಶುಭವನ್ನು ಪಡೆಯನು; ಕೆಟ್ಟನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಕೆಡುಕನಿಗೆ ಲಾಭವೆಂದೂ ಆಗದು. ಸುಳ್ಳುಗಾರನಿಗೆ ತೊಂದರೆಯೇ ಗತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ವಕ್ರಹೃದಯವುಳ್ಳವನು ಸಮೃದ್ಧಿಯನ್ನು ಹೊಂದುವುದಿಲ್ಲ; ಮೋಸದ ನಾಲಿಗೆಯುಳ್ಳವನು ಹಾನಿಗೆ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:20
11 ತಿಳಿವುಗಳ ಹೋಲಿಕೆ  

ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು.


ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ, ಮೂರ್ಖನ ಭಾಷಣ ನಾಶನಕ್ಕೆ ಸಮೀಪ.


ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು.


ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು.


ಶುದ್ಧನಿಗೆ ಪರಿಶುದ್ಧನೂ, ಮೂರ್ಖನಿಗೆ ವಕ್ರನೂ ಆಗಿರುವಿ.


ಜ್ಞಾನಿಯ ಮಾತು ಹಿತ. ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವುದು.


ಕೆಟ್ಟವನಿಗೆ ಶುಭಕಾಲವು ಬಾರದು, ದುಷ್ಟರ ದೀಪವು ಆರಿಯೇ ಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು