Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ವಿವೇಕಿಗೆ ಜ್ಞಾನವೇ ಗುರಿಯಾಗಿರುವುದು, ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ವಿವೇಕಿಗೆ ಜ್ಞಾನವೇ ಗುರಿ ಧ್ಯೇಯ; ಮೂಢನ ದೃಷ್ಟಿ ದಿಗಂತದಷ್ಟು ವಿಶಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ವಿವೇಕಿಗೆ ಜ್ಞಾನವೇ ಗುರಿಯಾಗಿರುವದು; ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ವಿವೇಕಿಯು ಜ್ಞಾನದ ಮೇಲೆ ಮನಸ್ಸಿಡುತ್ತಾನೆ. ಆದರೆ ಮೂಢನು ಬಹುದೂರದ ಸ್ಥಳಗಳ ಬಗ್ಗೆ ಕನಸು ಕಾಣುತ್ತಲೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ವಿವೇಕಿಯು ಜ್ಞಾನವನ್ನು ತನ್ನ ಮುಂದೆ ಇಟ್ಟುಕೊಳ್ಳುತ್ತಾನೆ. ಆದರೆ ಬುದ್ಧಿಹೀನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಅಲೆಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:24
10 ತಿಳಿವುಗಳ ಹೋಲಿಕೆ  

ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು.


ಜ್ಞಾನಿಯ ಹಾಗೆ ಇರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವುದು, ಒರಟು ಮುಖವು ಬದಲಾಗುವುದು.


ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.


ಬಗೆಬಗೆಯಾಗಿ ಆಶಿಸುವುದಕ್ಕಿಂತ ಕಣ್ಣೆದುರಿಗಿರುವುದನ್ನು ಅನುಭವಿಸುವುದೇ ಒಳ್ಳೇಯದು. ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು.


ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.


ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು, ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವುದು.


ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು, ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.


ಜ್ಞಾನಹೀನನಾದ ಮಗನು ತಂದೆಗೆ ಕಿರಿಕಿರಿ, ತಾಯಿಗೆ ಕರಕರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು