Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಶಿಷ್ಟನಿಗೆ ದಂಡನೆ ಯುಕ್ತವಲ್ಲ, ಧರ್ಮಿಷ್ಠನಿಗೆ ಪೆಟ್ಟು ಅಧರ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನೀತಿವಂತನಿಗೆ ದಂಡ ಸರಿಯಲ್ಲ; ಸಜ್ಜನನಿಗೆ ಶಿಕ್ಷೆ ನ್ಯಾಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಶಿಷ್ಟನಿಗೆ ದಂಡ ಅಯುಕ್ತ; ಧರ್ಮಿಷ್ಟನಿಗೆ ಪೆಟ್ಟು ಅಧರ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಿರಪರಾಧಿಯನ್ನು ಶಿಕ್ಷಿಸುವುದು ತಪ್ಪು. ನ್ಯಾಯವಂತರಾದ ನಾಯಕರಿಗೆ ಹೊಡೆಯುವುದು ತಪ್ಪು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನೀತಿವಂತನಿಗೆ ದಂಡ ವಿಧಿಸುವುದು ಒಳ್ಳೆಯದಲ್ಲದಿದ್ದರೆ, ಖಂಡಿತವಾಗಿಯೂ ಪ್ರಾಮಾಣಿಕ ಅಧಿಕಾರಿಗಳನ್ನು ಹೊಡೆಯುವುದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:26
10 ತಿಳಿವುಗಳ ಹೋಲಿಕೆ  

ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.


ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ.


ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.


ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.


ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯೆಯಿಂದ ಮಾತನಾಡಿಸು. ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನ ಕಾಲದಿಂದ ಈ ವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು