Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಚೀಟುಹಾಕುವುದರಿಂದ ವ್ಯಾಜ್ಯಗಳ ಶಮನ; ಜಟ್ಟಿಗಳ ನಡುವೆ ಕಾಳಗದ ವಿರಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಚೀಟುಹಾಕುವದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಲಿಷ್ಠರಾದ ಇಬ್ಬರು ವಾದಮಾಡುತ್ತಿರುವಾಗ ನಿರ್ಧಾರಕ್ಕಾಗಿ ಚೀಟುಹಾಕಿದರೆ ಅವರ ಜಗಳ ಶಮನವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಚೀಟು ಹಾಕುವುದರಿಂದ ವ್ಯಾಜ್ಯಶಮನ; ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:18
10 ತಿಳಿವುಗಳ ಹೋಲಿಕೆ  

ಮಡಲಿನಲ್ಲಿ ಚೀಟು ಹಾಕಬಹುದು, ಅದರ ತೀರ್ಪು ಯೆಹೋವನದೇ.


ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.


ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.


ಮೆರಾರೀ ಕುಟುಂಬಗಳಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳ ಸ್ವತ್ತಿನಿಂದ ಹನ್ನೆರಡು ಪಟ್ಟಣಗಳು ಚೀಟು ಹಾಕುವುದರಿಂದ ದೊರಕಿದವು.


ಸೌಲನು ಪುನಃ, “ನಮ್ಮಿಬ್ಬರೊಳಗೆ ಚೀಟು ಹಾಕಿರಿ” ಎಂದು ಹೇಳಿದನು. ಹಾಗೆಯೇ ಮಾಡಿದಾಗ ಚೀಟು ಯೋನಾತಾನನಿಗೆ ಬಿದ್ದಿತು.


ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯೊರ್ದನಿನ ಪಶ್ಚಿಮದ ಕಾನಾನ ದೇಶವನ್ನು ಚೀಟು ಹಾಕಿ ಇಸ್ರಾಯೇಲರ ಒಂಭತ್ತುವರೆ ಕುಲದವರಿಗೆ ಸ್ವತ್ತಾಗಿ ಕೊಟ್ಟನು


ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು.


ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.


ಅನಂತರ ಸೌಲನು, “ಇಸ್ರಾಯೇಲ್ಯರ ದೇವರೇ, ಸತ್ಯವನ್ನು ತಿಳಿಸು” ಎಂದು ಯೆಹೋವನನ್ನು ಪ್ರಾರ್ಥಿಸಿ ಚೀಟು ಹಾಕಿದಾಗ ಅದು ಅವನಿಗೂ ಯೋನಾತಾನನಿಗೂ ಬಂದಿತು, ಜನರು ಪಾರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು