Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮತಿಗೆಟ್ಟವನಿಗೆ ವಿವೇಕವು ಅನಿಷ್ಟ; ಸ್ವಾರ್ಥವನ್ನು ಪ್ರಕಟಿಸುವುದೆಂದರೆ ಅವನಿಗೆ ಬಲು ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವದೇ ಅವನಿಗಿಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೂಢನಿಗೆ ಅರ್ಥಮಾಡಿಕೊಳ್ಳಲು ಇಷ್ಟವಿಲ್ಲ. ಅವನು ತನ್ನ ಆಲೋಚನೆಗಳನ್ನೇ ಹೇಳಬಯಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ಆದರೆ ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವುದೇ ಅವನಿಗೆ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:2
14 ತಿಳಿವುಗಳ ಹೋಲಿಕೆ  

ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.


ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.


ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು.


ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.


ಇದಲ್ಲದೆ ಹುಚ್ಚನು ಬುದ್ಧಿತಪ್ಪಿ ತಿರುಗುವ ದಾರಿಯಲ್ಲಿ ತನ್ನ ಹುಚ್ಚುತನವನ್ನು ಎಲ್ಲರಿಗೆ ಪ್ರಕಟಮಾಡುವನು.


ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.


ಹಾಗೆಯೇ ನೀವು ಆತ್ಮೀಕವಾದ ವರಗಳಿಗಾಗಿ ಅತ್ಯಾಸಕ್ತಿಯುಳ್ಳವರಾಗಿರುವುದರಿಂದ ಸಭೆಗೆ ಹೆಚ್ಚಿನ ಅಭಿವೃದ್ಧಿ ಉಂಟಾಗುವ ಹಾಗೆ ತವಕಪಡಿರಿ.


ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.


“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು