Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜ್ಞಾನಹೀನನಿಗೆ ಬಾಯಿ ನಾಶ, ತುಟಿಗಳು ಪಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬುದ್ಧಿಹೀನನಿಗೆ ಬಾಯೇ ನಾಶ, ತುಟಿಗಳೇ ಅವನಿಗೆ ಪಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜ್ಞಾನಹೀನನಿಗೆ ಬಾಯಿ ನಾಶ; ತುಟಿಗಳು ಪಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮೂಢನು ಮಾತಿನಲ್ಲಿ ತನ್ನನ್ನೇ ನಾಶಪಡಿಸಿಕೊಳ್ಳುವನು. ಅವನ ಮಾತುಗಳೇ ಅವನಿಗೆ ಬಲೆಯಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬುದ್ಧಿಹೀನನ ಬಾಯಿಯು ಅವನ ನಾಶನ; ಅವನ ತುಟಿಗಳು ಅವನ ಪ್ರಾಣಕ್ಕೆ ಪಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:7
16 ತಿಳಿವುಗಳ ಹೋಲಿಕೆ  

ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ, ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.


ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.


ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ, ಮೂರ್ಖನ ಭಾಷಣ ನಾಶನಕ್ಕೆ ಸಮೀಪ.


ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೆಯೇ ಬರಲಿ,


ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.


ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿಕೊಂಡಿದ್ದೀ, ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ.


ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.


ಆಕೆಯನ್ನು ಕಾಣುತ್ತಲೇ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಕುಗ್ಗಿಸೇಬಿಟ್ಟೆಯಲ್ಲಾ; ನನಗೆ ಮಹಾಸಂಕಟವನ್ನು ಉಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು” ಎಂದು ಕೂಗಿಕೊಳ್ಳಲು


ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೇ ಇಳಿಯುವವು.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ, ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.


ವಿವೇಕಿಗೆ ವಿವೇಕವೇ ಜೀವದ ಬುಗ್ಗೆ, ಮೂರ್ಖನಿಗೆ ಮೂರ್ಖತನವೇ ದಂಡನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು