Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕಡುಕೋಪಿ ದಂಡನೆಯನ್ನು ಅನುಭವಿಸಲಿ ಬಿಡು; ಒಮ್ಮೆ ಬಿಡಿಸಿದರೆ, ಬಾರಿಬಾರಿಗೂ ಬಿಡಿಸಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ; ಬಿಡಿಸಿದರೆ ಬಾರಿಬಾರಿಗೆ ಬಿಡಿಸಬೇಕಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮುಂಗೋಪಿಯು ತನ್ನ ಕೋಪಕ್ಕೆ ದಂಡ ಕೊಡಲೇಬೇಕು. ಕೊಡಬೇಕಾದ ದಂಡದಿಂದ ತಪ್ಪಿಸಿದರೆ, ಅವನು ಅದೇ ಕಾರ್ಯಗಳನ್ನು ಮತ್ತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕೋಪಿಷ್ಟನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ, ತಿರುಗಿ ನೀನು ಬಿಡಿಸಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:19
11 ತಿಳಿವುಗಳ ಹೋಲಿಕೆ  

ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು ಗೋಡೆ ಬಿದ್ದ ಹಾಳೂರಿಗೆ ಸಮಾನ.


ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.


ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ,


ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.


ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು